ಖೇಲೋ ಇಂಡಿಯಾ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

IMG-20210802-WA0008

ದಾವಣಗೆರೆ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ Sports masseur, Sports Nutritioist, Head Coach (Shooting) Young ಮತ್ತು Professional ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರಿನ ವಿದ್ಯಾನಗರದಲ್ಲಿನ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರಕ್ಕೆ ರಾಜ್ಯ ಉತ್ಕೃಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್, ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿದ್ದು, ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ.9 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-237480 ಕ್ಕೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!