ಅಕ್ಟೊಬರ್ 23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಣೆ – ಜಿಲ್ಲಾ ಪಂಚಾಯತ್ ಸಿ ಇ ಓ

ದಾವಣಗೆರೆ : ವೀರಮಹಿಳೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಅ. 23 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಹೇಳಿದರು.
ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ ಣದಲ್ಲಿ ಶುಕ್ರವಾರ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅ. 23 ರಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಸರಳವಾಗಿ ಆಚರಿಸಲಾಗುವುದು. ಯಾವುದೇ ಮೆರವಣಿಗೆಗೆ ಅವಕಾಶವಿರುವುದಿಲ್ಲ. ಕಾರ್ಯಕ್ರಮದ ಅಂಗವಾಗಿ ಕಿತ್ತೂರು ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಗುವುದು. ಅಲ್ಲದೆ ವಚನ ಗಾಯನ ಕಾರ್ಯಕ್ರಮ ಆಯೋಜಿಸಲಾಗುವುದು, ಅಲ್ಲದೆ ರಾಣಿ ಚನ್ನಮ್ಮ ಅವರ ಜೀವನ ಸಾಧನೆ ಕುರಿತಂತೆ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಎಲ್ಲ ಸಮಾಜದ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಿಇಒ ಡಾ. ವಿಜಯ ಮಹಾಂತೇಶ್ ಅವರು ಮನವಿ ಮಾಡಿದರು.
ವೀರಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಅವರು ಈ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿದ್ದು, ಇವರ ಪುತ್ಥಳಿಯನ್ನು ನಗರದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಸ್ಥಾಪಿಸಬೇಕು, ಎಲ್ಲ ಗ್ರಾಮ ಪಂಚಾಯತಿಗಳಲ್ಲಿಯೂ ಕೂಡ ಜಯಂತಿ ಆಚರಣೆ ಆಗುವಂತಾಗಬೇಕು ಎಂದು ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಅವರು ಈ ಕುರಿತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರಾದ ಶಾಂತಕುಮಾರ್, ಅಶೋಕ್‍ಕುಮಾರ್ ಮತ್ತಿತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!