ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಕೆ.ಎಲ್.ಹರೀಶ್ ಬಸಾಪುರ ನೇಮಕ.
ದಾವಣಗೆರೆ :ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಕೆ.ಎಲ್. ಹರೀಶ್ ಬಸಾಪುರ ಇವರ ನೇಮಕಾತಿ ಪ್ರಸ್ತಾಪನೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅನುಮೋದಿಸಿದ್ದಾರೆ ಎಂದು ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷರಾದ ಪ್ರಿಯಾಂಕ ಖರ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ.ಎಲ್. ಹರೀಶ್ ಈ ಹಿಂದೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ, ದಾವಣಗೆರೆ ಜಿಲ್ಲಾ ಉಪಾಧ್ಯಕ್ಷರಾಗಿ, ಜಿಲ್ಲಾಧ್ಯಕ್ಷರಾಗಿ, ರಾಜ್ಯ ಸಮಿತಿ ಸದಸ್ಯರಾಗಿ, ರಾಜ್ಯ ಕಾರ್ಯದರ್ಶಿಯಾಗಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಪಕ್ಷ ಸಂಘಟನೆಯ ಕಾರ್ಯ ನಿರ್ವಹಿಸಿದ್ದಾರೆ.
ಜಿಲ್ಲಾ ಸಂಯೋಜಕರಾಗಿ ನೇಮಕ ಮಾಡಲು ಮಾಜಿ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ್ ರವರು, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ರವರು ಹಾಗೂ ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪ ನವರು ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಿದ್ದರು.