Konareddi resign:ಧಾರವಾಡ – ಹುಬ್ಬಳ್ಳಿ ಮಹಾನಗರ ಪಾಲಿಕೆ ಚುನಾವಣೆ ವೈಫಲ್ಯ ಹೊಣೆ ಹೊತ್ತು ಕೋನರೆಡ್ಡಿ ರಾಜೀನಾಮೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಚುನಾವಣಾ ಉಸ್ತುವಾರಿಯಾಗಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೋನರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಕಳೆದ ಬಾರಿ ಅಂದರೆ 2013 ರ ಪಾಲಿಕೆ ಚುನಾವಣೆಯಲ್ಲಿ 9 ಸ್ಥಳಗಳು ಗಳಿಸಿತ್ತು. ಆದರೆ ಈ ಬಾರಿ ಒಂದು ಸ್ಥಾನಕ್ಕೆ ತೃಪ್ತಿ ಪಡೆದುಕೊಳ್ಳಬೇಕಾಗಿದೆ.
ತಮ್ಮ ರಾಜೀನಾಮೆ ಕುರಿತು ಕೋನರೆಡ್ಡಿ ಅವರು ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರಿಗೆ ಪತ್ರ ಕಳುಹಿಸಿದ್ದಾರೆ.
ಪಕ್ಷದ ಕಾರ್ಯಕರ್ತರು ಸಾಕಷ್ಟು ಪ್ರಚಾರ ಮಾಡಿದರು.ಸಂಘಟನೆ ಕೈಗೊಂಡರು.ಮತದಾರರು ನಮಗೆ ಮತ ಹಾಕಿಲ್ಲ. ಚುನಾವಣೆ ವೈಫಲ್ಯದ ಹೊಣೆ ನಾನೇ ಹೊರುವೆ ಎಂದರು.
ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಶ್ರಮ ಪಟ್ಟರೆ ಫಲ ಲಭಿಸಲಿಲ್ಲ ಎನ್ನುವ ಕೊರಗು ಕಾಡುತ್ತಿದೆ. ಜವಾಬ್ದಾರಿ ಕಡಿಮೆ ಮಾಡಿಕೊಂಡು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ.ನನ್ನ ರಾಜೀನಾಮೆಯನ್ನು ಪಕ್ಷದ ವರಿಷ್ಠರು ಒಪ್ಪಿಕೊಳ್ಳಬೇಕು. ಕಲ್ಬುರ್ಗಿ ಪಾಲಿಕೆಯಲ್ಲಿ ಯಾರ ಜೊತೆ ಕೈಜೋಡಿಸಬೇಕು ಎನ್ನುವುದರ ಬಗ್ಗೆ ಒಂದೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.