Kotigobba 3 Release Tomorrow Kiccha Sudeep: ಟ್ವೀಟ್ ರ್ ನಲ್ಲಿ ಕ್ಷಮೆಯಾಚಿಸಿದ ಕಿಚ್ಚ ಸುದೀಪ್.!

kiccha sudeep on kotigobba 3 movie release issue

ಕೋಟಿಗೊಬ್ಬ-3 ಚಿತ್ರ ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವವರಿಗೆ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ.

ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ.

ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗು ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗು ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ.

ನಿಮ್ಮ ಪ್ರೀತಿಯ,

ಕಿಚ್ಚ ಸುದೀಪ್.

ಕೊಟಿಗೊಬ್ಬ ಚಿತ್ರ ನಾಳೆ ಶುಕ್ರವಾರ ಪ್ರಾರಂಭವಾಗಲಿದೆ ಎಲ್ಲರೂ ಸಹಕರಿಸಿ ಎಂದೂ ಅಭಿಮಾನಿಗಳಿಗೆ ಹೇಳಿದ್ದಾರೆ ಸುದೀಪ್.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!