ಕೊವಿಡ್ ಪಾಸಿಟಿವಿಟಿ ಅಬ್ಬರ ಹಲವರಲ್ಲಿ ಆತಂಕ ಸೃಷ್ಟಿ.! ಲಾಕ್ ಡೌನ್ ಜಾರಿಯಾಗುವ ಅನುಮಾನ.!?
ದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಅಬ್ಬರ ಹೆಚ್ಚಾಗಿರುವುದರಿಂದ ಹಲವು ರಾಜ್ಯಗಳು ನೈಟ್ ಕರ್ಫ್ಯೂ ಸಹಿತ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ಕರ್ನಾಟಕದಲ್ಲೂ ಸೋಂಕಿನ ಪರಿಣಾಮ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವೂ ಲಾಕ್ಡೌನ್ ಜಾರಿಗೊಳಿಸಬಹುದಾ ಎಂಬ ಅನುಮಾನ ಕಾಡಲು ಶುರುವಾಗಿದೆ.
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಕರ್ನಾಟಕ ಸಹಿತ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಪಾಸಿಟಿವಿಟಿ ರೇಟ್ ಕೂಡಾ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲೂ ಲಾಕ್‌ಡೌನ್ ಪ್ರಕ್ರಿಯೆ ಆರಂಭವಾದಂತಿದೆ.
ಪಶ್ಚಿಮ ಬಂಗಾಳ ಸರ್ಕಾರವು ಈ ಕೊರೋನಾ ಸೋಂಕಿನ ವೇಗಕ್ಕೆ ಬ್ರೇಕ್ ಹಾಕಲು ಕಠಿಣ ನಿಯಮ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಶಾಲೆ-ಕಾಲೇಜು, ಜಿಮ್‌ಗಳು, ಬ್ಯೂಟಿ ಸಲೂನ್‌ಗಳು ಸ್ವಿಮ್ಮಿಂಗ್ ಫೂಲ್‌ಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರಗಳಲ್ಲೂ ಶೇ.50ರ ಪ್ರಮಾಣ ಮೀರುವಂತಿಲ್ಲ. ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಬಾರ್‌ಗಳಲ್ಲೂ ಈ ರೀತಿ ನಿಯಮ ಅನುಸರಿಸಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.