ವಿಕಲಚೇತನ ನಿರಾಶ್ರಿತರ ಕೇಂದ್ರದಲ್ಲಿ ಮಕ್ಕಳಿಗೆ ಸಿಹಿ ಹಂಚಿ ಹುಟ್ಟುಹಬ್ಬ ಆಚರಿಸಿದ ಕೆಪಿಸಿಸಿ ಸಲೀಂ ಅಹ್ಮದ್
ಹಾವೇರಿ : ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ ರವರು ಹುಟ್ಟುಹಬ್ಬದ ಪ್ರಯುಕ್ತ ಹುಬ್ಬಳ್ಳಿಯ ಮನೋವಿಕಾಸ ವಿಕಲಚೇತನ ನಿರಾಶ್ರಿತರ ಕೇಂದ್ರದಲ್ಲಿ ವಿಕಲಚೇತನ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಹುಟ್ಟುಹಬ್ಬ ಆಚರಿಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರಾದ ಅನಿಲ್ ಕುಮಾರ ಪಾಟೀಲ, ಅಲ್ತಾಫ್ ಹಳ್ಳೂರ. ಮಾಜಿ ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಛಬ್ಬಿ,ನಿಗಮ ಮಂಡಳಿ ಮಾಜಿ ಅಧ್ಯಕ್ಷರಾದ ಸದಾನಂದ ಡಂಗಣ್ಣನವರ. ಮಾಜಿ ಶಾಸಕರಾದ ಕೋನರೆಡ್ಡಿ, ಚಂದ್ರಶೇಖರ ಜುಟ್ಟಲ. ಸುರೇಶ ಸವಣೂರ, ರಾಜಶೇಖರ ಮೆಣಸಿನಕಾಯಿ, ಸೈಯದ್ ಅಲಿ ಮಕಾಂದಾರ್, ಶ್ರೀನಿವಾಸ್ ಹಳ್ಳಳ್ಳಿ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.