ಕೆಪಿಎಸ್‌ಸಿಯಿಂದ 277 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದದ ಒಟ್ಟು 277 ಗ್ರೂಪ್– ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ.
ಮುಂದಿನ ತಿಂಗಳು ಏಪ್ರಿಲ್ 15ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.
ಅರ್ಜಿ ಸಲ್ಲಿಸುವ ಶುಲ್ಕ ಸಾಮಾನ್ಯ ವರ್ಗದವರಿಗೆ 300 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ 150 ರೂ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ–1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ವಿವರವಾದ ಅಧಿಸೂಚನೆಗೆ kpsc.kar.nic.in ಭೇಟಿ ನೀಡಬಹುದು.