ದಾವಣಗೆರೆ ದಕ್ಷಿಣಕ್ಕೆ ಕೃಷ್ಣಮೂರ್ತಿ ಪವಾರ್ ಅರ್ಜಿ ಸಲ್ಲಿಕೆ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿ ಮಹಾನಗರ ಪಾಲಿಕೆ ಮಾಜಿ ಸದಸ್ಯರು, ಮಾಜಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ ಪವರ್ ಅರ್ಜಿ ಸಲ್ಲಿಸಿದ್ದಾರೆ.
ಪಕ್ಷದ ಚಟುವಟಿಕೆಗಳು ಬಿಜೆಪಿ ಪಕ್ಷದ ತಮ್ಮ ವೈಯಕ್ತಿಕ ಪಕ್ಷ ಸಂಘಟನೆಗಳ ಬಯೋಡೇಟಾ ದೊಂದಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳಾಗಿ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.