ಕೃಷಿ ಪಂಡಿತ ಪ್ರಶಸ್ತಿ ಹಾಗೂ ಕೃಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ: ಜಿಲ್ಲೆಯಲ್ಲಿ 7.8 ಮಿ.ಮೀ. ಸರಾಸರಿ ಮಳೆ
ಕೃಷಿ ಪಂಡಿತ ಪ್ರಶಸ್ತಿ ಹಾಗೂ ಕೃಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ: ಕೃಷಿ ಇಲಾಖೆಯು 2021-22ನೇ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿ ಮತ್ತು ಆತ್ಮ ಯೋಜನೆಯ ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಜುಲೈ 20 ರೊಳಗಾಗಿ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಉಪ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು (ಆತ್ಮ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 7.8 ಮಿ.ಮೀ. ಸರಾಸರಿ ಮಳೆ
ಜಿಲ್ಲೆಯಲ್ಲಿ ಜೂ.4 ರಂದು 7.8 ಮಿ.ಮೀ. ಸರಾಸರಿ ಮಳೆಯಾಗಿದೆ. ಒಟ್ಟಾರೆ 1 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.
ಚನ್ನಗಿರಿ ತಾಲ್ಲೂಕಿನಲ್ಲಿ 4.34 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ- 7.45 ಮಿ.ಮೀ., ಹರಿಹರ-5.90 ಮಿ.ಮೀ., ಹೊನ್ನಾಳಿ -2.40 ಮಿ.ಮೀ. ಹಾಗೂ ಜಗಳೂರು ತಾಲ್ಲೂಕಿನಲ್ಲಿ 15.50 ಮಿ.ಮೀ ವಾಸ್ತವ ಮಳೆಯಾಗಿದೆ.
ಹರಿಹರ ಹಾಗೂ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ತಲಾ ಒಂದು ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ಒಟ್ಟು 01 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.