ದಾವಣಗೆರೆ – ಹರಪನಹಳ್ಳಿ ಮಾರ್ಗ ಮಧ್ಯ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪ್ರತಿಭಟನೆ
ದಾವಣಗೆರೆ: ದಾವಣಗೆರೆ ಹಾಗೂ ಹರಪನಹಳ್ಳಿ ಮಾರ್ಗ ಮಧ್ಯ ಬರುವ ಗ್ರಾಮದ ವಿದಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯಿಂದ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರಿಗಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಗ್ರಾಮೀಣ ಭಾಗಗಳಿಗೆ ಅರ್ಧ ಗಂಟೆಗೊಂದರಂತೆ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿ ಕೆಎಸ್‌ಆರ್‌ಟಿಸಿ ಎಟಿಎಸ್ ಅಧಿಕಾರಿಗಳ ಮೂಲಕ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ದಾವಣಗೆರೆಯ ಹಾಗೂ ಹರಪನಹಳ್ಳಿ ಮಾರ್ಗ ಮಧ್ಯ ಬರುವ ಗ್ರಾಮಗಳಿಂದ ನೂರಾರು ವಿದಾರ್ಥಿಗಳು ದಾವಣಗೆರೆಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ತೆರಳಲು ಹರಸಾಹಸ ಪಡಬೇಕಾಗಿರುವ ಸ್ಥಿತಿಯಿದೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.
ಬಸ್‌ಗಳ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಪ್ರತಿದಿನ ಎರಡು ಮೂರು ತರಗತಿಗಳಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಆದ್ದರಿಂದ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹರಪನಹಳ್ಳಿ ಹಾಗೂ ದಾವಣಗೆರೆ ಮಾರ್ಗಮಧ್ಯ ಬರುವ ಎಲ್ಲಾ ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.
ಮನವಿ ಸ್ವಿಕರಿಸಿದ ಅವರು ಎಟಿಎಸ್ ಅಧಿಕಾರಿಗಳು ವಿದಾರ್ಥಿಗಳಿಗೆ ಅನೂಕಲವಾಗುವ ರೀತಿ ಬಸ್ ಒದಗಿಸುವುದಾಗಿ ಭರವಸೆ ನೀಡಿದರು.
ಸಂಘಟನೆಯ ಜಿಲ್ಲಾಧಕ್ಷರಾದ ಕಿರಣ, ಜಿಲ್ಲಾ ಕಚೇರಿ ಕಾರ್ಯದರ್ಶಿ ಕಾವ್ಯ ಮತ್ತು ಮಧುಸೂದಲದನ್, ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ, ದರ್ಶನ್, ದಿವ್ಯ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.