Ksrtc; ನುಡಿದಂತೆ ನಡೆದು ಮಾದರಿಯಾದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್

IMG-20240915-WA0021

ದಾವಣಗೆರೆ; ನುಡಿದಂತೆ ನಡೆದು ಗ್ರಾಮಸ್ಥರ ಮೊಗದಲ್ಲಿ ಸಂತಸ ಮೂಡಿಸಿದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ಕೆ ಇಡೀ ಗ್ರಾಮವೇ ಅಭಿನಂದಿಸಿದೆ.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹರಪನಹಳ್ಳಿ ತಾಲ್ಲೂಕಿನ ಕೆ.ಕಲ್ಲಹಳ್ಳಿಯಲ್ಲಿ  ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಚಾರಕ್ಕಾಗಿ ತೆರಳಿದ್ದ ಸಂದರ್ಭದಲ್ಲಿ ಗ್ರಾಮಸ್ಥರು, ಗ್ರಾಮಕ್ಕೆ ಬಸ್ ಸೌಕರ್ಯ ಇಲ್ಲದ ಬಗ್ಗೆ ಸಮಸ್ಯೆ ತೊಡಿಕೊಂಡಿದ್ದರು. ಸಮರ್ಪಕ ಬಸ್  ಇಲ್ಲದ ಕಾರಣ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ಗಮನಸೆಳೆದಿದ್ದರು.

ಕೆ.ಕಲ್ಲಹಳ್ಳಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಾಧ್ಯವಾದಷ್ಟು ಶೀಘ್ರದಲ್ಲಿ ಕೆ.ಕಲ್ಲಹಳ್ಳಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದ್ದರ ಫಲವಾಗಿ ಸೆ.೧೫ ರಂದು ಕೆ.ಕಲ್ಲಹಳ್ಳಿ‌ಗ್ರಾಮಕ್ಕೆ ಬಸ್ ಸೌಕರ್ಯ ಒದಗಿಬಂದಿದೆ.ನುಡಿದಂತೆ ನಡೆದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!