KSRTC ನೌಕರರ ಸವಾಲ್.. ಮಾ.29ರಂದು ಬಸ್ ಸಂಚಾರ ವ್ಯತ್ಯಯ ಸಾಧ್ಯತೆ.
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತೊಮ್ಮೆ ಪ್ರತಿಭಟನೆಯ ಅಖಾಡಕ್ಕೆ ಧುಮುಕಲು ಸಜ್ಜಾದಂತಿದೆ. ತಮ್ಮ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಹಾಗೂ ಅಧಿಕಾರಿಗಳ ಕಿರುಕುಳ ತಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಈ ಬಾರಿ ನತ್ತೆ ಪ್ರತಿಭಟನೆಗೆ ಕೆಎಸ್ಸಾರ್ಟಿಸಿ ನೌಕರರ ಬಳಗ ಸಿದ್ದತೆ ನಡೆಸಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟ ಹಾಗೂ CITU ಫೆಡೆರೇಷನ್ ಈ ಹೋರಾಟಕ್ಕೆ ಕರೆ ನೀಡಿದ್ದು, ಮಾರ್ಚ್ 29ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿರುವ ನೌಕರರು ಅಂದು ಸೇವೆಯನ್ನು ಬಹಿಷ್ಕರಿಸಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ. ಈ ಹೋರಾಟ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ.
ಅಂದು, ಸಾರಿಗೆ ಸಚಿವ ಶ್ರೀರಾಮುಲು ಅವರ ಬಳ್ಳಾರಿಯಲ್ಲಿರುವ ಮನೆ ಮುಂದೆಯೂ ಪ್ರತಿಭಟನೆ ನಡೆಸಲು ಕೆಎಸ್ಸಾರ್ಟಿಸಿ ನೌಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.