KSRTC ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಕೊನೆಗೂ ವೇತನ ಪಡೆದ ಸಿಬ್ಬಂದಿ: ಯಾವ ನಿಗಮಕ್ಕೆ ಎಷ್ಟು ₹ ಹಣ.? ಇಲ್ಲಿದೆ ಮಾಹಿತಿ
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ನೌಕರರಿಗೆ ಸಿಹಿ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸಾರಿಗೆ ನೌಕರರ ಜುಲೈ ತಿಂಗಳ ವೇತನವನ್ನು ಸರಕಾರ ಬಿಡುಗಡೆ ಮಾಡಿದೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಸಾರಿಗೆ ನಿಗಮಗಳ ನಷ್ಟಕ್ಕೊಳಗಾಗಿದ್ದರಿಂದ ನೌಕರರ ವೇತನ ಪಾವತಿ ಸಾಧ್ಯವಾಗಿರಲಿಲ್ಲ. ಇದೀಗ ಒಟ್ಟು ವೇತನ ವೆಚ್ಚದ ಶೇ.25 ರಷ್ಟನ್ನು ಸೋಮವಾರ ಬಿಡುಗಡೆ ಗೊಳಿಸಲಾಗಿದೆ ಎಂದು ಕೆ ಎಸ್ ಆರ್ ಟಿ ಸಿ ಮೂಲಗಳು ತಿಳಿಸಿವೆ.
ಒಟ್ಟು 60.82 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕೆ ಎಸ್ ಆರ್ ಟಿ ಸಿ ನಿಗಮಕ್ಕೆ 27.74 ಕೋಟಿ ರೂಪಾಯಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 17.47 ಕೋಟಿ ರೂಪಾಯಿ, ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಗೆ 15.61 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.