ಕುವೆಂಪು ವಿವಿ ಸಿಬ್ಬಂದಿ ನಿಧನ, ವಿವಿಯ ಅಧಿಕಾರಿಗಳಿಂದ ಮೃತ ಸಿಬ್ಬಂದಿಗೆ ಶ್ರದ್ಧಾಂಜಲಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ದಾಸ್ತಾನು ಖರೀದಿ ವಿಭಾಗದ ಹಿರಿಯ ಸಹಾಯಕರಾಗಿದ್ದ ಎನ್. ಪಿ. ಸುರೇಶ್ ಅವರು ಶನಿವಾರ ಮೃತಪಟ್ಟಿದ್ದಾರೆ. ಮಣಿಪಾಲದ ಕೆಎಂಸಿ‌ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೂಲತಃ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರ ಗ್ರಾಮದವರಾದ ಸುರೇಶ್ ಅವರು ಶಿವಮೊಗ್ಗ ನಗರದ‌ ಬಸವನಗುಡಿ ಬಡಾವಣೆಯಲ್ಲಿ ನೆಲೆಸಿದ್ದರು. ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಪತ್ನಿ ಗೃಹಿಣಿಯಾಗಿದ್ದು, ಮಗಳು ತಿಪಟೂರಿನ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಇನ್ನು ಪುತ್ರ ಶಿವಮೊಗ್ಗ ನಗರದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

ಮೃತ ಸುರೇಶ್ ಅವರ ಗೌರವಾರ್ಥ ಇಂದು ವಿಶ್ವವಿದ್ಯಾಲಯದಲ್ಲಿ ‌ಶ್ರದ್ಧಾಂಜಲಿ ಸಭೆ ನಡೆಯಿತು.

ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!