ಗುರುಲಿಂಗಸ್ವಾಮಿ ಹೊಳೆಮಠ ಹೆಸರಿನಲ್ಲಿ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ

ಬೆಂಗಳೂರು:ಸುದ್ದಿ ಮೂಲ, ವಿಜಯ ಕರ್ನಾಟಕ, ಈ ಟಿವಿ, ಟಿವಿ 5, ವಿಜಯವಾಣಿ ಸೇರಿದಂತೆ ಹಲವು ಮಾಧಮಗಳಲ್ಲಿ ಕ್ರಿಯಾಶೀಲ ಪತ್ರಕರ್ತರಾಗಿ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರಾಗಿಯೂ ಸೇವೆ ಸಲ್ಲಿಸಿದ್ದ ದಿ.ಗುರುಲಿಂಗ ಸ್ವಾಮಿ ಹೊಳಿಮಠ ಅವರ ಸೇವೆ ಸ್ಮರಿಸಿ ಅವರ ಹೆಸರಿನಲ್ಲಿ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ.
ವಿಜಯಪುರದಲ್ಲಿ ಜನವರಿ 9&10 ರಂದು ನಡೆಯಲಿರುವ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಗುರುಲಿಂಗ ಸ್ವಾಮಿ ಹೊಳಿಮಠ ಹೆಸರಿನ ಪ್ರಶಸ್ತಿಯನ್ನು ಮುಖ್ಯಮಂತ್ರಿಗಳು
ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕೆಯುಡಬ್ಲ್ಯೂಜೆ ಪ್ರಕಟಣೆ ತಿಳಿಸಿದೆ.