Lake Silt: ರೈತರಿಗೆ ಕೆರೆ ಹೂಳು ಮಣ್ಣು ಬಳಸಿಕೊಳ್ಳಲು ಮುಕ್ತ ಅವಕಾಶ: ಆಳವಾಗಿ ತೆಗೆಯಲು ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ – ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

1000389831

filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 35;

ದಾವಣಗೆರೆ (Lake Silt):  ಕೆರೆ ಹೂಳೆತ್ತುವ ವೇಳೆ ತೆಗೆಯುವ ಮಣ್ಣನ್ನು ರೈತರು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಯಾವುದೇ ಕೆರೆಗಳಲ್ಲಿ ರೈತರು ತಮೊಮ ತೋಟ, ಹೊಲಗಳಿಗೆ ಮಣ್ಣು ಬಳಸಿಕೊಳ್ಳಬಹುದು. ಇದರಿಂದ ಕೆರೆಯ ನೀರಿನ ಸಂಗ್ರಹಣಾ ಸಾಮಥ್ರ್ಯ ಹೆಚ್ಚುವ ಜೊತೆಗೆ ರೈತರ ಜಮೀನಿನ ಫಲವತ್ತತೆ ಹೆಚ್ಚಿ ರಸಗೊಬ್ಬರಗಳ ಬಳಕೆ ಪ್ರಮಾಣ ಕಡಿಮೆ ಮಾಡುವರು. ಆದರೆ ಆಳವಾಗಿ ತೆಗೆಯಲು ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ, ಮಾಡಿದಲ್ಲಿ ರಾಜಧಾನ ಪಾವತಿ ಮತ್ತು ಅನುಮತಿ ಪಡೆದುಕೊಳ್ಳಬೇಕಾಗುತ್ತದೆ.

ಆದರೆ ಕೃಷಿ ಚಟುವಟಿಕೆಗಳಿಗೆ ಅನುಮತಿ ಬೇಕಿಲ್ಲ ಎಂದು ಸಷ್ಟಪಡಿಸಿದರು. ಆದ್ದರಿಂದ ಅಧಿಕಾರಿಗಳು ತಾಲ್ಲೂಕುವಾರು ಊಳೆತ್ತಲು ಅರ್ಹವಿರುವ ಕೆರೆಗಳ ಸಮಗ್ರ ವರದಿ ಒಂದು ವಾರದೊಳಗೆ ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಎಸ್ ಪಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಗಣಿ ಇಲಾಖೆ ಅಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

 

ಇತ್ತೀಚಿನ ಸುದ್ದಿಗಳು

error: Content is protected !!