ರಾಜ್ಯ ಸುದ್ದಿ

ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು? ಬಡ ರೈತರಿಗಾಗಿ ಮಿಡಿದ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮಲೆನಾಡು ಪ್ರದೇಶದಲ್ಲಿ, ಕಾಣೆ, ಬಾಣೆ, ಸೊಪ್ಪಿನ ಬೆಟ್ಟ, ಹುಲ್ಲುಬನ್ನಿ ಹಾಗೂ ಸರ್ಕಾರಿ ಬೀಳು, ಒಳಗೊಂಡಂತೆ, ಹಲವಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ, ಸಾವಿರಾರು, ಬಡವರು ಹಾಗೂ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ, ಬಗರ್ ಹುಕುಂ ಜಮೀನನ್ನು, ಮಂಜೂರು ಮಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ನಾಳಿನ ಬಜೆಟ್ನಲ್ಲಿ ಈ ಸಂಬಂಧ ಘೋಷಣೆ ಮಾಡಬೇಕೆಂದು ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿದ್ದಾರೆ.


ಸಚಿವ ಅರಗ ಜ್ಞಾನೇಂದ್ರ ಅವರು ಇಂದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಬಹು ದಿನಗಳ ಕಾಲದ ಈ ಬೇಡಿಕೆ ಬಗ್ಗೆ ಗಮನಸೆಳೆದರು. ಸಾವಿರಾರು ಬಡ ಕುಟುಂಬಗಳ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಬಗ್ಗೆ ಹೊಂದಿರುವ ಕನಸನ್ನು ನನಸು ಮಾಡಲು, ಮನವಿ ಮಾಡಿದರು.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!