ಪಾಲಿಕೆ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ಫ್ಲೆಕ್, ಬ್ಯಾನರ್ ಅಳವಡಿಸಿದರೆ ಕಾನೂನು ಕ್ರಮ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಫ್ಲೆಕ್ಸ್, ಬ್ಯಾನರ್, ಫಲಕ ಅಳವಡಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಮತ್ತು ಪ್ಲೆಕ್ಸ್/ಬ್ಯಾನರ್ ಮುದ್ರಣಾಕಾರರು ಸರ್ಕಾರಿ, ಖಾಸಗಿ, ಸಾರ್ವಜನಿಕ ಆಸ್ತಿಗಳು, ವಿದ್ಯುತ್ ಕಂಬಗಳು, ಮೀಡಿಯನ್ಸ್, ಡಿವೈಡರ್ಸ್, ಕಲ್ವರ್ಟ್, ರಸ್ತೆ ಬದಿ ಮರಗಳು, ಸರ್ಕಲ್‌ಗಳು ಹಾಗೂ ಇನ್ನಿತರೆ ಸ್ಥಳಗಳಲ್ಲಿ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯದೇ ಅನಧಿಕೃತವಾಗಿ ಪ್ಲೆಕ್ಸ್, ಬ್ಯಾನರ್, ಬಾವುಟ, ಬಂಟಿಂಗ್ಸ್ಗಳನ್ನು ಅಳಡಿಸುತ್ತಿರುವುದು ಕಂಡು ಬಂದಿದ್ದು ಇದರಿಂದಾಗಿ ಸಾರ್ವಜನಿಕ ಪ್ರದೇಶಗಳನ್ನು ವಿರೂಪಗೊಳಿಸುತ್ತಿರುವುದು ಹೆಚ್ಚುತ್ತಿದೆ.

ಈ ರೀತಿ, ಸಾರ್ವಜನಿಕ ಆಸ್ತಿಗಳನ್ನು ವಿರೂಪಗೊಳಿಸುತ್ತಿರುವುದು ಕರ್ನಾಟಕ ಮುಕ್ತ ಸ್ಥಳಗಳು (ವಿರೂಪಗೊಳಿಸುವಿಕೆ ತಡೆಗಟ್ಟುವಿಕೆ) ಕಾಯ್ದೆ-1981ರ ಕಲಂ (3) ರನ್ವಯ ಉಲ್ಲಂಘನೆ ಹಾಗೂ ಶಿಕ್ಷಾರ್ಹ ಅಪರಾಧವಾಗುತ್ತದೆ. ಕಾಯ್ದೆ ಪ್ರಕಾರ ಆರು ತಿಂಗಳು ಜೈಲು ಶಿಕ್ಷೆ ಅಥವಾ ರೂ.1000/- ದಂಡ ಅಥವಾ ಎರಡೂ ರೀತಿಯ ದಂಡನೆಯನ್ನು ವಿಧಿಸಲು ಅವಕಾಶವಿರುತ್ತದೆ. ಅಲ್ಲದೇ ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ರನ್ವಯ ನಗರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಪ್ಲೆಕ್ಸ್, ಬ್ಯಾನರ್‌ಗಳನ್ನು ಹಾಕುವುದು ನಿಯಮ ಉಲ್ಲಂಘನೆಯಾಗುತ್ತದೆ.

ಹೀಗಾಗಿ ಸಂಬಂಧಪಟ್ಟ ಯಾರೇ ಆಗಲೀ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆದು ಫಲಕಗಳನ್ನು ಅಳವಡಿಸಬೇಕು, ತಪ್ಪಿದಲ್ಲಿ ಕಾಯ್ದೆಯಂತೆ ಮೊಕದ್ದಮೆ ದಾಖಲಿಸಲಾಗುವುದೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!