Leopard found: ಹೊನ್ನಾಳಿ – ನ್ಯಾಮತಿ ಬಳಿ ಚಿರತೆಗಳು ಪ್ರತ್ಯಕ್ಷ : ರೇಣುಕಾಚಾರ್ಯ ಹಾಗೂ ಅರಣ್ಯ ಇಲಾಖೆ ಪರಿಶೀಲನೆ

ದಾವಣಗೆರೆ: ನ್ಯಾಮತಿ ತಾಲ್ಲೂಕು ದಾನಿಹಳ್ಳಿ ಸಮೀಪ ಚಿರತೆಗಳು ಪ್ರತ್ಯಕ್ಷವಾಗಿವೆ.!
ಕಳೆದ ನಾಲ್ಕು ದಿನಗಳ ಹಿಂದೆ ಎರಡು ಚಿರತೆಗಳು ಪ್ರತ್ಯಕ್ಷವಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಿರತೆಗಳನ್ನು ಹಿಡಿಯಲು ಸೂಚಿಸಿರುವುದಾಗಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಯಿ ಚಿರತೆ ಮತ್ತು ಅದರ ಮರಿ ಚಿರತೆಗಳು ರೈತರಿಗೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಹೆಜ್ಜೆ ಗುರುತುಗಳು ಪತ್ತೆಯಾಗಿವೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಇಂದು ಸಂಜೆ ಚಿರತೆಗಳನ್ನು ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಬೊನ್ ಅನ್ನು ಸ್ಥಳಕ್ಕೆ ತರಿಸಿದ್ದು, ಈ ಭಾಗದ ಸುತ್ತಮುತ್ತಲಿನ ಗ್ರಾಮಗಳ ಜನರು ಚಿರತೆಗಳನ್ನು ಹಿಡಿಯುವವರೆಗೆ ಎಚ್ಚರಿಕೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ.