ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಸಿದ್ದರಾಮಯ್ಯ ಸ್ಪರ್ಧಿಸಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವ್ಯಂಗ್ಯ

ಬೆಳಗಾವಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ವ್ಯಂಗ್ಯವಾಡಿದ್ದಾರೆ.
ಧರ್ಮನಾಥ ಭವನದಲ್ಲಿ ಶುಕ್ರವಾರ ಅಭ್ಯರ್ಥಿಗಳ ಆಯ್ಕೆ ಕುರಿತು ಕರೆದಿದ್ದ ಚುನಾವಣಾ ಸಿದ್ಧತೆ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ವರುಣಾದಲ್ಲಿ ಸೋಲುತ್ತೇನೆ ಎಂಬ ಭಯದಲ್ಲಿರುವ ಸಿದ್ದರಾಮಯ್ಯ ಇಡೀ ರಾಜ್ಯದಲ್ಲಿ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅವರಿಗೆ ಇನ್ನೂ ಕ್ಷೇತ್ರ ಸಿಕ್ಕಿಲ್ಲ. ವರುಣಾದಲ್ಲಿ ಸೋಲುತ್ತೇನೆ ಎನ್ನುವ ಭಯದಿಂದ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಲು ಹೊರಟಿದ್ದಾರೆ. ಕೋಲಾರ ಸೇರಿದಂತೆ ವಿವಿಧೆಡೆ ಕ್ಷೇತ್ರ ಹುಡುಕುತ್ತಿದ್ದಾರೆ. ಸಿದ್ದರಾಮಯ್ಯನವರು 224 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿ ಎಂದು ಹೇಳಿದರು.
ವರುಣಾದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳುತ್ತಿದ್ದು, ತಂದೆಗಾಗಿ ಸ್ಥಾನ ಬಿಟ್ಟುಕೊಡುವ ಮೂಲಕ ಪುತ್ರ ಡಾ.ಯತೀಂದ್ರ ತ್ಯಾಗ ಮಾಡಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿಗಳು ಸೋಲುವ ಭೀತಿಯಲ್ಲಿದ್ದಾರೆ, ಅದಕ್ಕಾಗಿಯೇ ಅವರು ಸ್ಪರ್ಧಿಸಲು ಮತ್ತೊಂದು ಸುರಕ್ಷಿತ ಕ್ಷೇತ್ರವನ್ನು ಹುಡುಕುತ್ತಿದ್ದಾರೆ, ಇದು ಕಾಂಗ್ರೆಸ್ ಯಾವ ಮಟ್ಟಕ್ಕೆ ಇಳಿದಿದೆ ಎಂಬುದನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.