ಕಾರುಚಾಲಕನ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಸಿಎಂಗೆ ಯತ್ನಾಳ ಪತ್ರ

ಬೆಂಗಳೂರು– ಸಚಿವ ಸಂಪುಟದ ಕ್ಯಾಬಿನೆಟ್ ದರ್ಜೆಯ ಸಚಿವರೊಬ್ಬರು ವಿಜಯಪುರದ ಯಾರೋ ಒಬ್ಬ ಕಾರುಚಾಲಕನ ಕೊಲೆ ಮಾಡಿರುವ ಬಗ್ಗೆ ಮಾಧ್ಯಮದಲ್ಲಿ ಆರೋಪ ಕೇಳಿ ಬಂದಿದ್ದು, ಈ ಕುರಿತು ಸತ್ಯಾ ಸತ್ಯತೆ ತಿಳಿಯಲು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಲು ಶೀಘ್ರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಕಾರು ಚಾಲಕನ ಹತ್ಯೆ ಕುರಿತು ಸಂಪುಟ ದರ್ಜೆ ಸಚಿವರು ಮಾಧ್ಯಮದ ಮುಂದೆ ಗಂಭೀರ ಆರೋಪದ ಹೇಳಿಕೆ ನೀಡಿದ್ದು, ಇಂತಹ ಸುಳ್ಳು ಆರೋಪದಿಂದ ಸರ್ಕಾರಕ್ಕೆ ಮತ್ತು ಜನತೆಗೆ ತಪ್ಪುಸಂದೇಶ ರವಾನೆಯಾಗುತ್ತದೆ. ದೇಶದ ಜನತೆಗೆ ಸತ್ಯಾಸತ್ಯತೆ ತಿಳಿಯಬೇಕಿದೆ. ಈ ಹಿನ್ನೆಲೆಯಲ್ಲಿ ಇಪ್ಪತ್ನಾಲ್ಕು ಗಂಟೆಯಲ್ಲಿಯೇ ಈ ಪ್ರಕರಣವನ್ನು ಸಿಬಿಐ ಗೆ ವಹಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
ಸುಳ್ಳು ಆರೋಪ ಮಾಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸುವಂತೆಯೂ ಅವರು ಒತ್ತಾಯಿಸಿ ಕಳೆದ ಜ.15ರಂದು ಪತ್ರ ಬರೆದಿದ್ದಾರೆ.

Click to join WhatsApp group

https://chat.whatsapp.com/KKoKihnFdmWGVs3kl4

Leave a Reply

Your email address will not be published. Required fields are marked *

error: Content is protected !!