ಜನವರಿ 21 ರಂದು ನೇರ ಸಂದರ್ಶನ

ದಾವಣಗೆರೆ: ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ  ವಿವಿಧ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳಲ್ಲಿ ಅಪ್ರೆಂಟಿಶಿಪ್  ಆಯ್ಕೆಗೆ ಜ.21 ರಂದು ಬೆ.10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಐಟಿಐ (ಯಾವುದೇ ಟ್ರೇಡ್) ವ್ಯಾಸಂಗ ಪೂರೈಸಿದ 18 ರಿಂದ  24 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಈ ವಿಳಾಸದಲ್ಲಿ ಭಾಗವಹಿಸಿ ಈ ನೇರ ಸಂದರ್ಶನದ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 08192-259446 6361550016  ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!