ವಿಧಾನಸಭಾ ಪರಿಷತ್ ಚುನಾವಣೆ ಘೋಷಣೆ-ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿ – ಮಹಾಂತೇಶ ಬೀಳಗಿ

ದಾವಣಗೆರೆ: ಕರ್ನಾಟಕ ವಿಧಾನಸಭಾ ಪರಿಷತ್ ಚುನಾವಣೆಗೆ ಭಾರತ ಚುನಾವಣಾ ಆಯೋಗವು ವೇಳಪಟ್ಟಿ ಘೋಷಿಸಿದ್ದು, ಮಾದರಿ ನೀತಿ ಸಂಹಿತೆಯು ದಾವಣಗೆರೆ ಜಿಲ್ಲೆ ಮತ್ತು ಕ್ಷೇತ್ರ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಡಿಸೆಂಬರ್ 16 ರವರೆಗೆ ಮಾದರಿ ನೀತಿ ಸಂಹಿತೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.
ಚಿತ್ರದುರ್ಗ ಸ್ಥಳೀಯ ಸಂಸ್ಥೆ ವ್ಯಾಪ್ತಿಗೆ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕುಗಳು, ಹಾಗೂ ಶಿವಮೊಗ್ಗ ಸ್ಥಳೀಯ ಸಂಸ್ಥೆ ವ್ಯಾಪ್ತಿಗೆ ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳು ಒಳಪಡುತ್ತವೆ.
ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.