ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಸದಸ್ಯರಿಂದ ಪ್ರತಿಭಟನೆ
ಚನ್ನಗಿರಿ : ತಾಲ್ಲೂಕಿನ ತಾವರಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯಿತಿಗೆ ಸರಿಯಾಗಿ ಹಾಜರು ಆಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಯಾವ ಆಸಕ್ತಿಯನ್ನು ತೂರಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ.ಉಪಾಧ್ಯಕ್ಷೆ ಸೇರಿದಂತೆ ಸದಸ್ಯರು ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ ಒಂದು ತಿಂಗಳಿಂದ ಪಿಡಿಓ ಹಾಗೂ ಕಾರ್ಯದರ್ಶಿ ಸರಿಯಾಗಿ ಹಾಜರಾಗುತ್ತಿಲ್ಲ. ವಾರಕ್ಕೊಮ್ಮೆ ಬಂದು ಸಹಿ ಮಾಡಿ ಹೋಗುತ್ತಾರೆ ಎಂದು ಆರೋಪಿಸಿದರು. ಜನಪ್ರತಿನಿಧಿಗಳಿಗೂ ಸ್ಪಂದಿಸುತ್ತಿಲ್ಲ. ಕುಡಿಯುವ ನೀರು. ಬೀದಿ ದೀಪ ಸೇರಿದಂತೆ ಹಲವು ಸಮಸ್ಯೆಗಳು ಇವೆ.ಕಚೇರಿ ಕೆಲಸಗಳಿಗೆ ಎಂದು ಬರುವ ಜನರು ಕೆಲಸ ಆಗದೆ ಹಿಂದಿರುಗಿ ಹೋಗುತ್ತಾರೆ, ಮೂರು ತಿಂಗಳಿಂದ ಸಭೆ ಕರೆದಿಲ್ಲ ಎಂದು ಗ್ರಾಮ.ಪಂಚಾಯಿತಿ ಅಧ್ಯಕ್ಷೆ ಲತಾ ದೂರಿದರು. ಕೆಲ ಸಮಯದ ನಂತರ ಇಓ. ಬಿ.ಕೆ. ಉತ್ತಮ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೀಗ ತೆಗೆದು ಸಮಸ್ಯೆಗಳ ಕುರಿತು ಚರ್ಚೆ ಮಾಡಿ ಸಮಸ್ಯೆ ನಿವಾರಣೆ ಮಾಡುತ್ತೆವೆ ಎಂದು ಅಶ್ವಾಸನೆ ನೀಡಿದರು. ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮಾ. ಸದಸ್ಯರಾದ ಅಣ್ಣಾಮಲೈ. ಸಂದೀಪ್. ಪ್ರಸನ್ನ. ಸಾವಿತ್ರಮ್ಮ. ಈಶ್ವರಪ್ಪ. ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಈಶ್ವರ್ ಇದ್ದರು.