ಲೋಕಸಭಾ ಚುನಾವಣೆ : ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳಿಂದ ಮತದಾನ ಜಾಗೃತಿಗೆ ಬೈಕ್ ರ್ಯಾಲಿ

ದಾವಣಗೆರೆ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರ ಸಹಯೋಗದಲ್ಲಿ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದಲೇ ಆಯೋಜಿಸಿಲಾಗಿದ್ದ ಮಹಿಳಾ ಬೈಕ್ ರ್ಯಾಲಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ.ಎನ್.ಹೆಗಡೆ ಚಾಲನೆ ನೀಡಿದರು.

ಶನಿವಾರ (6) ರಂದು ನಗರದ ಪಿ.ಬಿ.ರಸ್ತೆಯಲ್ಲಿರುವ ಡಿ.ಆರ್.ಆರ್.ಸ್ಕೂಲ್ ಬಳಿ ಲೋಕಸಭಾ ಚುನಾವಣೆ-2024ರ ಮತದಾನ ಕುರಿತು ಜಾಗೃತಿ ಮೂಡಿಸಲು ಮಹಿಳೆಯರಿಂದ ಆಯೋಜಿಸಲಾಗಿದ್ದ ಬೈಕ್ ರ್ಯಾಲಿ ಉದ್ದೇಶಿಸಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಸುರೇಶ.ಬಿ.ಇಟ್ನಾಳ್ ಮಾತಾನಾಡಿ ದಾವಣಗೆರೆ ನಗರದಲ್ಲಿ ಮಹಿಳಾ ಮತದಾರರೇ ಹೆಚ್ಚು ಇರುವರು, ಆದರೂ ಕಡಿಮೆ ಮತದಾನವಾಗುತ್ತಿದೆ. ಆದ್ದರಿಂದ ಈ ಮಹಿಳೆಯರಿಂದಲೇ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.


ನಗರ ವ್ಯಾಪ್ತಿಯಲ್ಲಿ ಯಾವ ಯಾವ ಸ್ಥಳದಲ್ಲಿ ಕಡಿಮೆ ಮತದಾನವಾಗಿದೆ, ಅಂತಹ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತದಾನ ಜಾಗೃತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದ್ದರಿಂದ ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿದೆ. ಮತದಾನ ಪ್ರತಿಯೊಬ್ಬ ಪ್ರಜೆಯ ಹಕ್ಕು, ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬ ವ್ಯಕ್ತಿಯು ಮತದಾನz ತಮ್ಮÀ ಹಕ್ಕನ್ನು ಚಲಾಯಿಸುವುದು ಬಹಳ ಮುಖ್ಯವಾಗಿದೆ. ಅದರಲ್ಲಿಯೂ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು ಎಂದರು.

ಜಾಗೃತಿ ಜಾಥಾದಲ್ಲಿ ಸುಮಾರು 200 ಬೈಕ್‍ಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಇತರೆ ಮಹಿಳೆಯರು ಭಾಗವಹಿಸಿದ್ದರು.
ಜಾಥಾವು ಹೊಸ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಭಗತ್‍ಸಿಂಗ್ ನಗರ, ಹೆಚ್.ಕೆ.ಆರ್ ಸರ್ಕಲ್, ದುರ್ಗಾಂಬಿಕಾ ದೇವಸ್ಥಾನದ ಮೂಲಕ ಐ.ಟಿ.ಐ ಗೇಟ್‍ವರೆಗೆ ಸಂಚರಿಸಿ ಮುಕ್ತಾಯಗೊಂಡಿತು.

ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ಉಪವಿಭಾಗಾಧಿಕಾರಿ ದುಗಾಶ್ರೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಪಾಲಿಕೆ ಆಯುಕ್ತರಾದ ರೇಣುಕಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!