Lokayukta: 23 ಕ್ಕೆ ಉಪ ಲೋಕಾಯುಕ್ತ ಬಿ.ವೀರಪ್ಪರಿಂದ ದಾವಣಗೆರೆಯಲ್ಲಿ ಉಪನ್ಯಾಸ

ದಾವಣಗೆರೆ: (Lokayukta) ಕರ್ನಾಟಕ ಲೋಕಾಯುಕ್ತ, ಜಿಲ್ಲಾ ವಕೀಲರ ಸಂಘ, ದಾವಣಗೆರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 23ರ ಬುಧವಾರ ಬೆಳಿಗ್ಗೆ 10ಕ್ಕೆ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿನ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಉಪನ್ಯಾನ ಮಾಲಿಕೆ ಸಾರ್ವಜನಿಕ ಆಡಳಿತ ಮತ್ತು ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ವಕೀಲರ ಪಾತ್ರ ಕುರಿತು ವಿಶೇಷ ಉಪನ್ಯಾಸ ಮಾಲಿಕೆ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಉದ್ಘಾಟಿಸುವರು. ದಾವಣಗೆರೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಕೆ.ವೇಲಾ, ಲೋಕಾಯುಕ್ತ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ, ಎನ್.ವಿ.ಅರವಿಂದ, ವಿ.ಎನ್. ಮಿಲನ, ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ.ಮ.ಕರೆಣ್ಣವರ ಆಗಮಿಸಲಿದ್ದಾರೆ ಎಂದು ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ತಿಳಿಸಿದ್ದಾರೆ.