Lokayukta: ಲೋಕಾಯುಕ್ತ ಬಲೆಗೆ ಹೊನ್ನಾಳಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಸತೀಶ್ ನಾಯ್ಕ್ ಟ್ರ್ಯಾಪ್

ದಾವಣಗೆರೆ: (Lokayukta) ಲೋಕಾಯುಕ್ತ ಬಲೆಗೆ ಹೊನ್ನಾಳಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಸತೀಶ್ ನಾಯ್ಕ್ ಟ್ರ್ಯಾಪ್ ಆಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಸಹಕಾರ ಇಲಾಖೆಯಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಸತೀಶ್ ನಾಯ್ಕ್, ರೈತ ಸಿಎಲ್ ದೇವರಾಜ್ ಎಂಬುವರಿಂದ ಕಚೇರಿಯಲ್ಲಿ ಮೂರು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಹೊನ್ನಾಳಿ ತಾಲೂಕಿನ ಚೀಲಾಪುರ ಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ನಡೆಸಲು ಲಂಚ ಸ್ವೀಕರಿಸುವ ವೇಳೆಯಲ್ಲಿ ದಾವಣಗೆರೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಐದು ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಡಲಾಗಿತ್ತು.ಇಂದು ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ಮಾರ್ಗದರ್ಶನದಲ್ಲಿ ಡಿಎಸ್ಪಿ ಕಲಾವತಿ ಮತ್ತು ಇನ್ಸ್ ಪೆಕ್ಟರ್ ಗಳಾದ ಸರಳ ಪಿ. ಮತ್ತು ಗುರು ಬಸವರಾಜ್ ದಾಳಿಯನ್ನು ನಡೆಸಿದ್ದಾರೆ.