“ಸೆಲ್ಪಿ ಮಮ್ಮಿ ಗೂಗಲ್ ಡ್ಯಾಡಿ ಸಿನಿಮಾ ನೋಡಿ”! ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪತ್ರ

cercular

ದಾವಣಗೆರೆ: ಸೆಲ್ಪಿ ಮಮ್ಮಿ ಗೂಗಲ್ ಡ್ಯಾಡಿ ಸಿನಿಮಾವನ್ನು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವೀಕ್ಷಿಸಿದ್ದು, ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಕರು, ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರು ಈ ಚಿತ್ರವನ್ನು ವೀಕ್ಷಿಸುವಂತೆ ಸೂಚಿಸಿ ಮೇ.30ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಎಲ್ಲಾ ಮಕ್ಕಳ ಪೋಷಕರಿಗೆ ಸೂಚಿಸಲು ಪತ್ರದಲ್ಲಿ ತಿಳಿಸಿದ್ದಾರೆ.

ಬಿ.ಸಿ. ನಾಗೇಶ್ ಅವರು ಬರೆದ ಪತ್ರದಲ್ಲಿ ನಾನು ಸೆಲ್ಪಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರವನ್ನು ವೀಕ್ಷಿಸಿದ್ದು, ಮೊಬೈಲ್ ಬಳಕೆಯಿಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಉಂಟಾಗುವ ಹಾನಿಯ ಕುರಿತಾಗಿ ಅರಿವು ಮೂಡಿಸುವ ಚಿತ್ರ ಇದಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಕರು, ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಪೋಷಕರು ಈ ಚಿತ್ರವನ್ನು ವೀಕ್ಷಿಸಿ, ಮೊಬೈಲ್ ಬಳಕೆಯ ದುಷ್ಪರಿಣಾಮದ ಬಗ್ಗೆ ಜಾಗೃತಿಯನ್ನು ಹೊಂದುವುದು ಸೂಕ್ತವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಷ್ಟೇಅಲ್ಲದೆ ಚಲನಚಿತ್ರ ನಟ ಸೃಜನ್ ಲೋಕೇಶ್ ಈ ಚಿತ್ರವನ್ನು ಮಕ್ಕಳಿಗೆ ತೋರಿಸುವಂತೆ ಸಚಿವರಿಗೆ ಪತ್ರ ಬರೆದಿದ್ದು, ಆ ಪತ್ರವನ್ನು ಲಗತ್ತಿಸಿ ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!