ಬಂಟ್ವಾಳ: ಮಾದಕ ವಸ್ತು ಸೇವನೆ ಮಾಡಿ, ಮಾರಾಟಕ್ಕೆ ಯತ್ನ: ವಾಹನ ಸಹಿತ ಮೂವರು ಪೊಲೀಸ್ ವಶ

ಬಂಟ್ವಾಳ: ಮಾದಕ ವಸ್ತು ಸೇವನೆ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ವಾಹನ ಸಹಿತ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳದ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ.

ಬಂಟ್ವಾಳದ ಬ್ರಹ್ಮರಕೂಟ್ಲು ಎಂಬಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವ ವೇಳೆ ನಂಬರ್ ಪ್ಲೇಟ್ ಇಲ್ಲದೆ ತ್ರಿಬಲ್ ರೈಡಿನಲ್ಲಿ ಬರುತ್ತಿದ್ದ ದ್ಬಿಚಕ್ರವಾಹನವೊಂದನ್ನು ತಡೆದಿದ್ದಾರೆ. ಈ ವೇಳೆ ಬೈಕ್‌ನಲ್ಲಿದ್ದ ನಝೀರ್ ಎಂಬಾತ ಹಾರಿ ಪರಾರಿಯಾಗಿದ್ದಾನೆ. ಈ ಸಂದರ್ಭದಲ್ಲಿ ಸಂಶಯಗೊಂಡ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ತಂಡ ಉಳಿದ ಇಬ್ಬರನ್ನು ವಿಚಾರಣೆ ನಡೆಸಿದಾಗ ಇವರು ನಿದ್ರಾಜನಕ ಮಾದಕವಸ್ತು ವನ್ನು ಸೇವನೆ ಮಾಡಿರುವುದು ಗಮನಕ್ಕೆ ಬಂದಿದೆ. ವಾಹನ ತಪಾಸಣೆ ನಡೆಸಿದಾಗ ಅದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇರಿಸಲಾಗಿದ್ದ ಮಾದಕವಸ್ತು ಕಂಡು ಬಂದಿದ್ದು ಪರಾರಿಯಾಗಿದ್ದ ಬಂಟ್ವಾಳ ನಿವಾಸಿ ನಝೀರ್ ಸಹಿತ ಮಂಚಿ ಗ್ರಾಮದ ಅಬ್ದುಲ್ ರಹೀಜ್ ಸಹಸವಾರ ಮಂಚಿ ನಿವಾಸಿ ದಾವುದುಲ್ ಅಮೀರ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬೈಕ್‌ ಸಹಿತ ಸುಮಾರು 4 ಸಾವಿರ ರೂ ಮೌಲ್ಯದ 4 ಗ್ರಾಂ 04 ಮಿ.ಗ್ರಾಂ ತೂಕದ MDMA ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!