ಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಬೆಂಗಳೂರು: ಲಂಚ ಸ್ವೀರಿಸುತ್ತಿದ್ದ ವೇಳೆ ಲೋಕಾಯುಕ್ತ (lokayukta)ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಪುತ್ರ ಪ್ರಶಾಂತ್​ಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್​ಡಿಎಲ್​ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಟೆಂಡರ್​ವೊಂದಕ್ಕೆ ಸಂಬಂಧಿಸಿದಂತೆ 80 ಲಕ್ಷ ಕಮಿಷನ್​​ ಕೇಳಿದ್ದರು.

ಈ ಪೈಕಿ ಮುಂಗಡವಾಗಿ ಪ್ರಶಾಂತ್ 40 ಲಕ್ಷ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದರು. ಬಳಿಕ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್‌ ಕಚೇರಿ ಮತ್ತು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಾಡಿದ್ದರು. ಈ ವೇಳೆ ಬರೊಬ್ಬರಿ ಒಟ್ಟು 7 ಕೋಟಿ 62 ಲಕ್ಷ ರೂ. ಹಣ ಪತ್ತೆಯಾಗಿದೆ. ಹಾಗೇ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!