ದಾವಣಗೆರೆ: ಭಾರತೀಯ ಜನತಾಪಕ್ಷದ ಪರಾರ್ ಥಮಿಕ ಸದಸ್ಯತ್ವ ಸ್ಥಾನದಿಂದ ಮಾಡಾಳು ಮಲ್ಲಿಕಾರ್ಜುನ ಅವರನ್ನು ಆರು ವರ್ಷಗಳ ಉಚ್ಛಾಟನೆ ಮಾಡಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಆದೇಶಿಸಿದ್ದಾರೆ.
ಚನ್ನಗಿರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಪಕ್ಷದ ಶಿಸ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಉಚ್ಛಾಟಿಸಿರುವುದಾಗಿ ಅವರು ಹೇಳಿದ್ದಾರೆ.
