ಸ್ಮಾರ್ಟ್ ಸಿಟಿ ಲಿ. ಶಾಲಾ – ಕಾಲೇಜಿನ ಸ್ಮಾರ್ಟ್ ತರಗತಿಗಳ ವೀಕ್ಷಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ದಾವಣಗೆರೆ: ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ 61 ಶಾಲೆಗಳು ಮತ್ತು 9 ಕಾಲೇಜುಗಳಲ್ಲಿ ಅಳವಡಿಸಲಾಗಿರುವ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ತರಗತಿಗಳನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವೀಕ್ಷಿಸಿದರು.
ನಗರದ ಆಂಜನೇಯ ಬಡಾವಣೆಯ ಮಹಿಳಾ ಪದವಿ ಕಾಲೇಜು, ಐಟಿಐ ಕಾಲೇಜು, ಕೆ.ಬಿ. ಬಡಾವಣೆಯ ಡಿ.ಜೆ.ವಿ. ಪ್ರೌಢಶಾಲೆ ಹಾಗೂ ಕಾವೇರಮ್ಮ ಶಾಲೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸ್ಮಾರ್ಟ್ ಕ್ಲಾಸ್‌ನ ಉಪಯುಕ್ತತೆ ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಅರ್ಥೈಸಿಕೊಂಡ ಬಗೆಯನ್ನು ವಿದ್ಯಾರ್ಥಿಗಳೊಂದಿಗೆ ನೇರ ಸಂವಹನ ನಡೆಸಿದರು.
ಸ್ಮಾರ್ಟ್ ಕ್ಲಾಸ್ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಮಟ್ಟವನ್ನು ಉತ್ತಮಗೊಳಿಸುವ ಒಂದು ಅತ್ಯುತ್ತಮ ಮಾಧ್ಯಮವಾಗಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿಯ ಹಾದಿಯಲ್ಲಿ ಸಾಗಿ, ಆಲೋಚನಾ ಮತ್ತು ಕಲ್ಪನಾಶಕ್ತಿಯನ್ನು ಹೆಚ್ಚಿಸುವಲ್ಲಿ ಮಹತ್ತರ ಪಾತ್ರವಹಿಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಬಿ. ಮಲ್ಲಾಪುರ, ಮುಖ್ಯ ಅಭಿಯಂತರ ಸತೀಶ್, ಐಸಿಟಿ ಉಪ-ಪ್ರಧಾನ ವ್ಯವಸ್ಥಾಪಕ ಸುನೀಲ್ ಕೆ. ವಿ., ವ್ಯವಸ್ಥಾಪಕ ಬಿ. ಮಾಲತೇಶ್ ಹಾಗೂ ಆಯಾ ಕಾಲೇಜಿನ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.