Mahanthesh Bilagi: ಭೀಕರ ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಸಹಿತ ಮೂವರು ದುರ್ಮರಣ

ಜೀವರ್ಗಿ: ( Mahanthesh Bilagi) ವಿವಾಹ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದವರಿದ್ದ ಕಾರು ಅಪಘಾತಕ್ಕೀಡಾಗಿ ಕಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ , ಅವರ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ.
ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ, ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.
ದಾವಣಗೆರೆ ಜಿಲ್ಲಾಧಿಕಾರಿ ಆಗಿದ್ದ ವೇಳೆ ಸಾರ್ವಜನಿಕ ಸೇವೆಗೆ ತಮ್ಮ ಕರ್ತವ್ಯವನ್ನು ಮುಡುಪಾಗಿಟ್ಟಿದ್ದರು. ಕೋವಿಡ್ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ಮರಣದಿಂದ ದಾವಣಗೆರೆ ಜಿಲ್ಲೆಯ ಜನರು ಶೋಕ ವ್ಯಕ್ತಪಡಿಸಿದರು.
