ಲೋಕಸಭಾ ಚುನಾವಣೆಗೆ ದಾವಣಗೆರೆಯಿಂದ ಮಹಿಮಾ ಸ್ಪರ್ಧೆ

ಲೋಕಸಭಾ ಚುನಾವಣೆಗೆ
ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಯುಪಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದಾಗಿ ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಜೆ. ಪಟೇಲ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರ ವೇಳೆಗೆ ದೇಶದ ರಾಜಕಾರಣದಲ್ಲಿ ಮಹತ್ತರ ಬದಲಾವಣೆ ಆಗಲಿದೆ ಎಂದು ಹೇಳಿದರು.
2024ರ ವೇಳೆಗೆ ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಒಂದೇ ವೇದಿಕೆ ಅಡಿಯಲ್ಲಿ ಬರಲಿವೆ. ಆಗ ಸಂಸತ್ ಚುನಾವಣೆಗೆ ಸ್ಪರ್ಧಿಸುತ್ತೇನೆ. ಬದಲಾದ ಸನ್ನಿವೇಶದಲ್ಲಿ ನಾನು ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡಲು ಬಯಸುತ್ತೇನೆ ಎಂದು ಹೇಳಿದು.
ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಅದರೂ, ವಿಧಾನಸಭಾ ಕ್ಷೇತ್ರದ ಎಲ್ಲಾ 224 ಕ್ಷೇತ್ರಗಳಿಂದ ಸಂಯುಕ್ತ ಜನತಾ ದಳದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದವರು ಸ್ಪಷ್ಟಪಡಿಸಿದರು.
ಈಗಾಗಲೇ ಜೆಡಿಯು ಪಕ್ಷದಿಂದ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದು ಉಳಿದ 50ರಿಂದ 100 ಕಡೆಗಳಲ್ಲಿ ಜೆಡಿಯು ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಉಳಿದ ಕಡೆಗಳಲ್ಲಿಯೂ ಅಭ್ಯರ್ಥಿಗಳನ್ನು ಕೆಲವು ಮಾನದಂಡ ಆಧಾರದಲ್ಲಿ ಆಯ್ಕೆ ಮಾಡಲಾಗುವು ಎಂದು ಮಾಹಿತಿ ನೀಡಿದರು.