ಮಾಜಿ ಮೇಯರ್ ಉಮಾ ಪ್ರಕಾಶ್ ರಿಂದ ಮೈಸೂರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ
ದಾವಣಗೆರೆ: ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನ ಮಾಡಿದ ಪೊಲೀಸರ ಕ್ರಮಕ್ಕೆ ಮಾಜಿ ಮೇಯರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಗ್ಯಾಂಗ್ ರೇಪ್ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರ ಕಾರ್ಯವನ್ನು ಮಹಾನಗರ ಪಾಲಿಕೆ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಉಮಾ ಪ್ರಕಾಶ್ ಅವರು ಶ್ಲಾಘಿಸಿದ್ದಾರೆ. ವೈಜ್ಞಾನಿಕ ಸಾಕ್ಷಾಧಾರಗಳನ್ನು ಒದಗಿಸಿ ಆರೋಪಿಗಳನ್ನು ಆದಷ್ಟು ಬೇಗ ಕಠಿಣ ಶಿಕ್ಷೆಗೆ ಒಳಪಡಿಸುವ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿದ್ದಾರೆ. ಇಂತಹ ಆರೋಪಿಗಳಿಗೆ ಕೊಡುವ ಶಿಕ್ಷೆಗೆ ಹೆದರಿ ಮುಂದೆ ಯಾವುದೇ ವ್ಯಕ್ತಿಗಳು ಇಂತಹ ಅಪರಾಧವನ್ನು ಮಾಡಲು ಹೆದರಬೇಕು ಆ ರೀತಿ ಕಾನೂನು ತಿದ್ದುಪಡಿಗೆ ಕ್ರಮ ಕೈಗೊಳ್ಳಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.