malnutrition; ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಿ
ದಾವಣಗೆರೆ, ಆ. 25 : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ (malnutrition) ಬಳಲುತ್ತಿರುವ ಮಕ್ಕಳು ಕಂಡುಬಂದಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ ತಿಳಿಸಿದರು.
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜರುಗಿದ ಅಪೌಷ್ಟಿಕ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಅರಿವು ಮತ್ತು ಐಸಿಡಿಎಸ್ ಕಾರ್ಯಕ್ರಮ ಅನುಷ್ಠಾನ ಸಿಬ್ಬಂದಿಗಳಿಗೆ ಏರ್ಪಡಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಗಾರ ಉದ್ದೇಶಿಸಿ ಅವರು ಮಾತನಾಡಿದರು.
ಪರವಾನಗಿ ಪಡೆಯದೇ ಚೀಟಿ ನಡೆಸುವ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ – ಹೆಚ್.ಅನ್ನಪೂರ್ಣ
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಪರೀಕ್ಷಿಸಿ, ಅವರ ಆರೋಗ್ಯ ಸುಧಾರಣೆಗೆ ಅಗತ್ಯವಿರುವ ಚಿಕಿತ್ಸೆ ಹಾಗೂ ಊಟ, ಔಷಧೋಪಚಾರ ನೀಡಬೇಕು. ತೂಕ, ವಯಸ್ಸು, ಎತ್ತರ ಈ ಮೂರು ಮಾನದಂಡಗಳನ್ನು ಇರಿಸಿಕೊಂಡು ಮಕ್ಕಳ ಪೌಷ್ಟಿಕತೆಯ ಮಟ್ಟವನ್ನು ನಿರ್ಧರಿಸಲಾಗುತ್ತದೆ. ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಸೇರಿ ಸಮೀಕ್ಷೆ ನಡೆಸಿ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ, ಪೌಷ್ಟಿಕತೆಗೆ ಬೇಕಾದ ಅಗತ್ಯ ಆಹಾರವನ್ನು ನೀಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್ ಉಪಸ್ಥಿತರಿದ್ದರು.