ಕರೆಂಟ್ ಬಿಲ್ ಕಟ್ಟದೆ ಬೆಸ್ಕಾಂ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ವ್ಯಕ್ತಿ ಬಂಧನ

ಕೊಪ್ಪಳ: ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದಲ್ಲದೇ, ಕೇಳಿದ ಬೆಸ್ಕಾಂ ಸಿಬ್ಬಂದಿಗೇ ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದ್ದು, ಇದೀಗ ಆ ವ್ಯಕ್ತಿ ಪೊಲೀಸರ ಅತಿಥಿಯಾಗಿದ್ದಾನೆ.
ತಾಲ್ಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ವಿದ್ಯುತ್ ಬಿಲ್ ಬಾಕಿ ವಸೂಲಾತಿಗೆ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದಿದ್ದ ಚಂದ್ರಶೇಖರ ಹಿರೇಮಠ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಚಂದ್ರಶೇಖರ್ ಗೃಹಬಳಕೆ ವಿದ್ಯುತ್ ಸಂಪರ್ಕ ಪಡೆದುಕೊಂಡು ಬಿಲ್ ಬಾಕಿ ಉಳಿಸಿಕೊಂಡಿದ್ದರು. ಅನಧಿಕೃತವಾಗಿ ಪಡೆದುಕೊಂಡಿದ್ದ ಸಂಪರ್ಕವನ್ನು ಪ್ರಶ್ನಿಸಿ, ಬಿಲ್ ಪಾವತಿಸುವಂತೆ ಹೇಳಿದ್ದಕ್ಕೆ ಬೆಸ್ಕಾಂ ಸಿಬ್ಬಂದಿ ಆರ್. ಮಂಜುನಾಥ ಅವರ ಮೇಲೆ ಹಲ್ಲೆ ಮಾಡಿದ್ದು, ಇದರ ವಿಡಿಯೊ ವೈರಲ್ ಆಗಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.