ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಅಪಹರಿಸಿದ್ದ ಆರೋಪಿಗೆ ಜೈಲು ಶಿಕ್ಷೆ, ದಂಡ!

ದಾವಣಗೆರೆ : ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ ಆರೋಪಿಗೆ ದಾವಣಗೆರೆಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷಗಳ ಕಾಲ ಜೈಲು ಸಜೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಆರೋಪಿ ಸುಭಾನ್ 2019ರಲ್ಲಿ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವುದಾಗಿ ಪುಸಲಾಯಿಸಿ ಆಕೆಯನ್ನು ಮಹಾರಾಷ್ಟçಕ್ಕೆ ಕರೆದುಕೊಂಡು ಹೋಗಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಅಜ್ಜಿ ದಾವಣಗೆರೆಯ ಮಹಿಳಾ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ಠಾಣಾಧಿಕಾರಿ ಪ್ರಕಾಶ್ ಅವರು ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲುವಾಸ ಹಾಗೂ ಹತ್ತು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದ ರೇಖಾ ಎಸ್. ಕೋಟೆಗೌಡರ್ ವಾದ ಮಂಡಿಸಿದ್ದರು.

 

garudavoice21@gmail.com 9740365719

Leave a Reply

Your email address will not be published. Required fields are marked *

error: Content is protected !!