ದಾವಣಗೆರೆ: ವೀರಶೈವ ಮಹಾಸಭಾದ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಂಗಳಗೌರಿ ವ್ರತವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆಯ ರೇಣುಕಾ ಮಂದಿರದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ಶುಭ ಐನಳ್ಳಿ ಅವರ ನೇತೃತ್ವದಲ್ಲಿ ನಡೆಯಿತು.
ಈ ಕಾರ‍್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ|| ಶಾಮನೂರು ಶಿವಶಂಕರಪ್ಪನವರು, ಉದ್ಯಮಿ ಎಸ್.ಎಸ್.ಗಣೇಶ್ ಮತ್ತವರ ಶ್ರೀಮತಿ ರೇಖಾ ಗಣೇಶ್, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್, ವಕೀಲರಾದ ಪ್ರಕಾಶ್ ಪಾಟೀಲ್, ಬಿ.ಜೆ.ರಮೇಶ್, ಕೊರಟಗೆರೆ ಶಿವಕುಮಾರ್ ಮತ್ತಿತರರು ಭಾಗವಹಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೀರಶೈವ ಮಹಾಸಭಾದ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
