ಅವಕಾಶಗಳ ಸಾಗರ ವಾಣಿಜ್ಯ ಶಾಸ್ತ್ರ – ಸಹಾಯಕ ಪ್ರಾಧ್ಯಾಪಕ ವೆಂಕಟೇಶ್ ಬಾಬು

ದಾವಣಗೆರೆ: ಇಂದಿನ ಕಾರ್ಪೊರೇಟ್ ಜಗತ್ತಿನಲ್ಲಿ ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿಗಳಿಗೆ ಭರಪೂರ ಅವಕಾಶಗಳು ಸಿಗುತ್ತವೆ ವಿದ್ಯೆಯ ಜತೆಗೆ ಒಂದಿಷ್ಟು ಕೌಶಲ್ಯ ಗಳನ್ನು ಬೆಳೆಸಿಕೊಂಡರೆ ಅವರಿಗೆ ಕಾರ್ಪೊರೇಟ್ ಜಗತ್ತಿನಲ್ಲಿ ಉದ್ಯೋಗ ನಿಶ್ಚಿತ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್ ಬಾಬು ಹೇಳಿದರು. ಅವರು ಇಂದು ನಗರದ ಸಂತ ಪೌಲರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಾಣಿಜ್ಯಶಾಶ್ತ್ರದಲ್ಲಿನ ಅವಕಾಶಗಳು ಕುರಿತು ವಿಶೇಷ ಉಪನ್ಯಾಸ ನೀಡಿದರು.

ವಾಣಿಜ್ಯ ಶಾಸ್ತ್ರ ವಿಷಯಗಳ ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ನಂತರ ಉನ್ನತ ಶಿಕ್ಷಣದಲ್ಲಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಭರಪೂರ ಅವಕಾಶಗಳನ್ನು ಪಡೆಯಲಿದ್ದಾರೆ ಸಾಮಾನ್ಯರಂತೆ ಪದವಿ ಪಡೆದರೂ ಅವರಿಗೆ ಉದ್ಯೋಗ ಸಿಗುವುದು ನಿಶ್ಚಿತ .ಪದವಿಯ ಆಯ್ಕೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ನಿರ್ಧರಿಸಿಕೊಂಡು ಪದವಿಯ ಆಯ್ಕೆ ಮಾಡಿದರೆ ಅವರ ಗುರಿ ಸಾಧಿಸಲು ಅನುಕೂಲವಾಗುತ್ತದೆ ಪದವಿ ಶಿಕ್ಷಣದೊಂದಿಗೆ ಕೌಶಲ್ಯ ಗಳನ್ನು ಬೆಳಸಿಕೊಳ್ಳುವುದು ಮುಖ್ಯವಾಗುತ್ತದೆ. ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿಗಳು ತಾವು ಕೂಡ ಒಂದಿಷ್ಟು ಕಷ್ಟಪಟ್ಟು ಶ್ರದ್ಧೆಯಿಂದ ಓದಿದರೆ ಸಾರ್ವಜನಿಕ ಸೇವೆಯ ಕ್ಷೇತ್ರಗಳಲ್ಲಿ ಸಿಗುವಂಥ ಉನ್ನತ ಅಧಿಕಾರವನ್ನು ಪಡೆದು ಸಮಾಜಮುಖಿ ಕೆಲಸಗಳಲ್ಲಿ ತೊಡಗಬಹುದು ಎಂದು ಅಭಿಪ್ರಾಯಪಟ್ಟರು. ಉನ್ನತ ಮಟ್ಟದ ಸಾಧನೆಗೆ ಹಾರ್ಡ್ ವರ್ಕ್ ದೊಂದಿಗೆ ಒಂದಿಷ್ಟು ಸ್ಮಾರ್ಟ್ ವರ್ಕ್ ಮಾಡಿದರೆ ವಾಣಿಜ್ಯ ವಿದ್ಯಾರ್ಥಿಗಳು ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮೇಘನಾಥ್ ರವರು ಮಾತನಾಡುತ್ತಾ ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸದೊಂದಿಗೆ ನೀವುಗಳು ಪ್ರಶ್ನೆಗಳನ್ನು ಕೇಳಿಕೊಂಡು ಅದಕ್ಕೆ ಉತ್ತರವನ್ನು ಹುಡುಕಿದಾಗ ಕಾರ್ಯಕ್ರಮವು ಫಲಪ್ರದವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಉಪನ್ಯಾಸ ಮಾಲಿಕೆ ನಂತರ ತಾವುಗಳು ಏಕೆ ಏನು ಹಾಗೂ ಹೇಗೆ ಎಂಬ ಪ್ರಶ್ನೆ ಕೇಳಿಕೊಂಡು ಉತ್ತರ ಹುಡುಕಿ ನಂತರ ಅದು ನಿಮಗೆ ಜೀವನದಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ವಿಶ್ವನಾಥ್ ರವರು ನಿರೂಪಿಸಿದರು ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ರಮೇಶ್ ರವರು ಅತಿಥಿಗಳನ್ನು ಸ್ವಾಗತಿಸಿದರು ಉಪನ್ಯಾಸಕಿ ಡೆಬೋರಾ ಅವರು ವಂದಿಸಿದರು ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕಿರಣ ಕುಮಾರ್ ಹಾಗೂ ಇತರರು ಭಾಗವಹಿಸಿದ್ದರು .ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೆಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Leave a Reply

Your email address will not be published. Required fields are marked *

error: Content is protected !!