ಮದುವೆ ಊಟ ಮಾಡಿ 150ಕ್ಕೂ ಹೆಚ್ಚು ಜನ ಅಸ್ವಸ್ಥ

ದಾವಣಗೆರೆ: ಮದುವೆ ಊಟ ಮಾಡಿ 150 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಹೊನ್ನಾಳಿ ತಾಲೂಕಿನ ಹಳೇ ದೇವರಹೊನ್ನಾಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಂದ್ರಪ್ಪ ಎನ್ನುವರ ಮದುವೆ ಕಾರ್ಯಕ್ರಮದಲ್ಲಿ ಈ ಘಟನೆ ಸಂಭವಿಸಿದ್ದು, ಮದುವೆಗೆ ಶುಭಕೋರಿ, ಭೋಜನ ಸವಿದ ನಂತರಲ್ಲಿ 150 ಕ್ಕೂ ಅಧಿಕ ಜನರಿ ವಾಂತಿ ಭೇದಿ ಶುರುವಾಗಿ ಅಸ್ವಸ್ಥಗೊಂಡಿದ್ದಾರೆ.
ತಕ್ಷಣವೇ ಅವರೆಲ್ಲರನ್ನು ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹತ್ತು ಜನ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನಲೆ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೊನ್ನಾಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.