ದಾವಣಗೆರೆ: ಫೆ.12- ಕರುನಾಡ ಕದಂಬ ರಕ್ಷಣಾ ವೇದಿಕೆ ಹರಿಹರ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹರಿರ ಟೈಮ್ಸ್ ಪತ್ರಿಕೆಯ ದಶಮಾನೋತ್, ಕಾರ್ಯಕ್ರಮ ಹಾಗೂ ಸರ್ವಧರ್ಮೀಯರ ಉಚಿತ ಸಾಮೂಹಿಕ ಕಲ್ಯಾಣ ಮಹೋತ್ಸವವನ್ನು ಇದೇ ಮಾ.3ರಂದು ಹರಿಹರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರುನಾಡ ಕದಂಬ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಹೆಚ್.ಸುಧಾಕರ್ ತಿಳಿಸಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೀ ಕನ್ನಡ ಮಹರ್ಷಿ ವಾಣಿ ಖ್ಯಾತಿಯ ಡಾ.ಮಹರ್ಷಿ ಆನಂದ ಗುರೂಜಿ ಹಾಗೂ ರಾಜ್ಯದ ಹಲವು ಮಠಾಧೀಶರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹರಿಹರ ಶಾಸಕ ಎಸ್.ರಾಮಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಬಿ.ಪಿ. ಹರೀಶ್, ಮುಖಂಡರಾದ ಚಂದ್ರಶೇಖರ್ ಪೂಜಾರ್, ಶ್ರೀನಿವಾಸ್ ನಂದಿಗಾವಿ ಮಾಂಗಲ್ಯ ವಿತರಣೆ ಮಾಡಲಿದ್ದಾರೆ ಎಂದು ಹೇಳಿದರು.
ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವವರು ಫೆ.25ರೊಳಗೆ ಹರಿಹರ ಟೈಮ್ಸ್ ಪತ್ರಿಕಾಲಯ ಅಥವಾ 90085 24770 ಸಂಖ್ಯೆಗೆ ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಹೆಚ್.ಕೆ. ಕೊಟ್ರಪ್ಪ, ಪ್ರಕಾಶ್, ಬಸವರಾಜ್, ಶಿವರಾಜ್, ವೆಂಕಟೇಶ್ ಉಪಸ್ಥಿತರಿದ್ದರು.
