ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ 13ರಂದು ಬೃಹತ್ ಪ್ರತಿಭಟನೆ
ದಾವಣಗೆರೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ) ವತಿಯಿಂದ ಹಲವು ಬೇಡಿಕೆಗಳ ಈಡೇರಿಕೆಗಾಗಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಎಸ್.ಅಡಿವೆಪ್ಪ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.13ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಡಾ.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೊ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಎ.ಜಿ ಸದಾಶಿವ ಆಯೋಗದ ವರದಿ ಶೀಘ್ರ ಜಾರಿಗೊಳಿಸುವುದು, ಬೇಡ ಜಂಗಮರ ನಕಲಿ ಪ್ರಮಾಣ ಪತ್ರ ವಿರೋಧಿಸಿ, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಕಡ್ಡಾಯ ವಿದ್ಯಾರ್ಥಿ ವೇತನ ಹೆಚ್ಚಳ ಮಾಡುವುದು, ಕೆಎಸ್ಸಾರ್ಟಿಸಿ ಬಸ್ ನಿಲ್ದಾಮಕ್ಕೆ ಡಾ.ಅಂಬೇಡ್ಕರ್ ಹೆಸರು ಇಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಂಜುನಾಥ್ ಹೆಚ್.ಹಳೇಕುಂದುವಾಡ, ಮಂಜುನಾಥ ಹೆಚ್.ಇಂದ್ರನಗರ, ನಿಂಗಪ್ಪ ಬಿ.ಹಳೇಚಿಕ್ಕನಹಳ್ಳಿ, ಅಭಿನಾಶ್ ಇತರರು ಇದ್ದರು.