ಒಳ ಮೀಸಲಾತಿ ವಿರೋಧಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ
ದಾವಣಗೆರೆ: ಒಳ ಮೀಸಲಾತಿ ವಿರುದ್ಧ ಭೋವಿ ಲಂಬಾಣಿ, ಕೊರಮ, ಕೊರಚ ಸಮಾಜದ ಬಂಧುಗಳು ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ಒಳಮೀಸಲಾತಿಯೇ ಅಸಂವಿಧಾನಿಕ ಆಗಿರುವಾಗ ಗುಂಪು ಮೂರರ ಹೆಸರಿನಲ್ಲಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಶೇ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಿರುವುದು ಅವೈಜ್ಞಾನಿಕವಾಗಿದ್ದು, ನಮ್ಮ ಸಮುದಾಯಗಳಿಗೆ ಮಾಡಿದ ಮಹಾದ್ರೋಹವಾಗಿದೆ.
ಸಂವಿಧಾನದಲ್ಲಿ ಅವಕಾಶವಿಲ್ಲದ ಹಾಗೂ ಸುಪ್ರೀಂಕೋರ್ಟ್‌ನ ತೀರ್ಪಿಗೆ ವಿರುದ್ಧವಾಗಿ ಪರಿಶಿಷ್ಟ ಜಾತಿಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ ಒಳಮೀಸಲಾತಿ ಹಂಚಿಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಿರುವುದನ್ನು ತಡೆಹಿಡಿಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಭೋವಿ ಸಮಾಜದ ಜಿಲ್ಲಾಧ್ಯಕ್ಷ ಪಿ. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಎಸ್., ಎಸ್.ಶ್ರೀನಿವಾಸ್ ಬಾಡಾ ಕ್ರಾಸ್, ಬಣಜಾರ ಸಮಾಜದ ಜಿಲ್ಲಾಧ್ಯಕ್ಷ ನಂಜಾನಾಯ್ಕ, ಪ್ರಧಾನ ಕಾರ್ಯದರ್ಶಿ ಶಶಿನಾಯ್ಕ, ಸಂದೇಶ್ ನಾಯ್ಕ, ಡಿ.ಬಸವರಾಜ್ ಇತರರು ಇದ್ದರು.