ಮೇ.10 ರಂದು ಸಾರ್ವತ್ರಿಕ ರಜೆ
ಬೆಂಗಳೂರು: ಮೇ.10 ರಂದು ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ, ಸಂಘ-ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.