ಮೇ 8 ಸಂಜೆಯಿಂದ 11 ರ ಬೆಳಗ್ಗೆ ಮಧ್ಯ ಮಾರಾಟ ನಿಷೇಧ
ದಾವಣಗೆರೆ : ವಿಧಾನಸಭಾ ಸಾರ್ವತಿಕ ಚುನಾವಣೆ ಮತದಾನವು ಮೇ 10 ರಂದು ನಡೆಯಲಿದ್ದು ಈ ವೇಳೆ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೇ 8 ರಂದು ಸಂಜೆ 6.00 ಗಂಟೆಯಿಂದ ಮೇ 11 ರ ಬೆಳಿಗ್ಗೆ 6.00 ಗಂಟೆಯವರೆಗೆ ಹಾಗೂ ಮತ ಏಣಿಕೆ ನಡೆಯುವ ಮೇ 13 ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೂ ಜಿಲ್ಲೆಯಾದ್ಯಂತ ಎಲ್ಲಾ ಬಗೆಯ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.
ನಿಷೇಧಿತ ಅವಧಿಯಲ್ಲಿ ಮದ್ಯದಂಗಡಿ ಮುಚ್ಚುವಂತೆ ಆದೇಶಿಸಿ ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬಾ, ಛತ್ರ ಹಾಗೂ ಇನ್ನಿತರ ಯಾವುದೇ ಸಾರ್ವಜನಿಕ ಮತ್ತು ಯಾವುದೇ ಖಾಸಗಿ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.