ಸುದ್ದಿ ಕ್ಷಣ

Mayakonda; ಮಾಯಕೊಂಡ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ – ಶಾಸಕ ಕೆ.ಎಸ್.ಬಸವಂತಪ್ಪ

Mayakonda; All round development of Mayakonda Constituency - MLA K.S.Basavanthappa

ದಾವಣಗೆರೆ: ಮಾಯಕೊಂಡ ಕ್ಷೇತ್ರ Mayakonda ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸುತ್ತೇನೆ. ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮನವಿ ಮಾಡಿದರು.

ತಾಲೂಕಿನ ಮಾಯಕೊಂಡ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಂಥಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪೌರಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮಾಯಕೊಂಡ ಕ್ಷೇತ್ರವನ್ನು ಮೊದಲಿನಿಂದಲೂ ಕಡೆಗಣಿಸಲಾಗಿದೆ. ಇನ್ನು ಮುಂದೆ ಹಾಗೆ ಆಗಲು ಬಿಡುವುದಿಲ್ಲ. ಮಾಯಕೊಂಡ ಕ್ಷೇತ್ರ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಜವಾಬ್ದಾರಿ ನನ್ನದ್ದಾಗಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ ಲೋಕಿಕೆರೆ ವೀರ ಯೋಧ ನಾಗರಾಜ್ ರವರಿಗೆ ಹುಟ್ಟೂರಿನಲ್ಲಿ ಗೌರವ ಸನ್ಮಾನ

ಮಾಯಕೊಂಡ ಗ್ರಾಮ ಪಂಚಾಯಿತಿಗೆ ಸುಸಜ್ಜಿತ ಕಟ್ಟಡ ನಿರ್ಮಿಸಬೇಕಾಗಿದೆ. ಗ್ರಾಮ ಪಂಚಾಯಿತಿ ಆಡಳಿತ, ನರೇಗಾ ಅನುದಾನವನ್ನು ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಬಳಸಿರುವುದು ಸರಿಯಾದ ಕ್ರಮವಲ್ಲ. ಸರ್ಕಾರದ ಅನುದಾನದಿಂದ ಮಾತ್ರ ಅಭಿವೃದ್ಧಿ ಮಾಡಬೇಕೆಂದು ಸಲಹೆ ನೀಡಿದರು.ಗ್ರಾಪಂ ಅಧ್ಯಕ್ಷೆ ಶಿವಮ್ಮ ಮಲ್ಲಿಕಾರ್ಜುನ, ಉಪಾಧ್ಯಕ್ಷ ಮಂಜುನಾಥ್, ಉಪ ತಹಸೀಲ್ದಾರ್ ಹಾಲೇಶಪ್ಪ, ಗ್ರಾಪಂ ಪಿಡಿಒ ನಾಗರಾಜ, ಎಪಿಎಂಸಿ ಮಾಜಿ ಅಧ್ಯಕ್ಷ ರಾಜೇಂದ್ರಣ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ವೆಂಕಟೇಶ್, ಗೋಪಾಲಪ್ಪ, ಮೆಡಿಕಲ್ ರುದ್ರೇಶಣ್ಣ, ಬೀರಪ್ಪ ಹಾಗೂ ಸರ್ವ ಸದಸ್ಯರು, ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Most Popular

To Top