ಉಕ್ರೇನ್‌ನಿಂದ ಬಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ರಾಜ್ಯದಲ್ಲೇ ವಿದ್ಯಾಭ್ಯಾಸ; ಸಧ್ಯಕ್ಕೆ ವಿದ್ಯಾರ್ಥಿಗಳು ಯಾವುದೇ ಶುಲ್ಕ ಕಟ್ಟುವ ಅಗತ್ಯವಿಲ್ಲ.! ಸಚಿವ ಡಾ. ಸುಧಾಕರ್

ಬೆಂಗಳೂರು: ಉಕ್ರೇನ್‌ನಿಂದ ತಾಯ್ನಾಡಿಗೆ ಆಗಮಿಸಿರುವ ಮೆಡಿಕಲ್ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ರಾಜ್ಯದಲ್ಲಿಯೇ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಉಕ್ರೇನ್‌ನಿಂದ ಬಂದ ವಿದ್ಯಾರ್ಥಿಗಳ ಜತೆ ಸಭೆ ನಡೆಸಿದ ಸಚಿವ ಸುಧಾಕರ್, ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಶಿಕ್ಷಣ ಮುಂದುವರೆಸಲು ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳಿದ್ದು, ಈ ಕಾಲೇಜುಗಳಲ್ಲಿ ಅವರ ಕಲಿಕೆ ಮುಂದುವರೆಯುವ ನಿಟ್ಟಿನಲ್ಲಿ ಒಂದು ಸಮಿತಿ ರಚನೆ ಮಾಡಲಾಗಿದೆ ಎಂದಿದ್ದಾರೆ.

ಸುಮಾರು 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್‌ನಿಂದ ರಾಜ್ಯಕ್ಕೆ ಮರಳಿದ್ದು, ಅವರ ವಿದ್ಯಾಭ್ಯಾಸ ನಿಂತುಹೋಗಿದೆ. ಹಾಗಾಗಿ ಅವರ ಕಲಿಕೆ ಮುಂದುವರೆಯಬೇಕು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ 60 ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸುವ ಬಗ್ಗೆ ವಿಸಿಯವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಸಧ್ಯಕ್ಕೆ ವಿದ್ಯಾರ್ಥಿಗಳು ಯಾವುದೇ ಶುಲ್ಕ ಕಟ್ಟುವ ಅಗತ್ಯವಿಲ್ಲ. ಸಮಿತಿ ವರದಿ ಬಂದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!