ದಾವಣಗೆರೆ ಜಿಲ್ಲೆಯ ಯೋಜನೆಗಳ ಕುರಿತು ಬೆಂಗಳೂರಿನಲ್ಲಿ ಸಭೆ.

ಬೆಂಗಳೂರು: ಬೆಂಗಳೂರು ವಿಧಾನಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್ ರವರ ಕಛೇರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ದಾವಣಗೆರೆ ನಗರ ಮತ್ತು ಗ್ರಾಮಾಂತರ ಯೋಜನೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮತ್ತು ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದ ಜಿಲ್ಲೆಯ ಯೋಜನೆಗಳ ಕುರಿತು ನಡೆದ ಸಭೆಯಲ್ಲಿ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಧೂಡ ಅಧ್ಯಕ್ಷರಾದ ದೇವರಮನೆ ಶಿವಕುಮಾರ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಶ್ರೀಮತಿ ಎಂ.ಎಸ್.ಅರ್ಚನಾ, ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎನ್. ಶಶಿಕುಮಾರ್, ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಅಭಿಯಂತರ ಸತ್ಯನಾರಾಯಣ, ದಾವಣಗೆರೆ ಮಹಾನಗರ ಪಾಲಿಕೆ, ಧೂಡ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!